ಶಿರಸಿ ನೂತನ ಬಸ್ ನಿಲ್ದಾಣ ಉದ್ಘಾಟನೆ
ಶಿರಸಿ : ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾನ್ಯ ಶಾಸಕ ಶಿವರಾಮ ಹೆಬ್ಬಾರ್ ಅವರು ಶಿರಸಿ ನೂತನ ಬಸ್ ನಿಲ್ದಾಣ ಕೇಂದ್ರ ಹಾಗೂ ಸಾರಿಗೆ ಇಲಾಖೆ ಶಿರಸಿ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ, ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರಾದ ರಾಜು ಕಾಗೆ, ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಸೇರಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


