ಬೆಂಗಳೂರು: ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಕ್ತ ವ್ಯವಸ್ಥೆಯಿಲ್ಲ ಎಂಬ ಕಾರಣಕ್ಕೆ ಸಧ್ಯಕ್ಕೆ ಯಾವುದೇ ಪಂದ್ಯಗಳನ್ನು ನಡೆಸಲು ಅನುಮತಿ ನೀಡದಿರಲು ಸರಕಾರ ತೀರ್ಮಾನಿಸಿದೆ.
ಪಂದ್ಯಕ್ಕೆ ಅನುಮತಿ ನೀಡುವ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡಿದ್ದು, ವರದಿಯಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸರಿಯಾದ ವ್ಯವಸ್ಥೆಯಿಲ್ಲದ ಕಾರಣ ಅನುಮತಿ ನೀಡುವಂತಿಲ್ಲ ಎಂದು ಹೇಳಿದೆ.
ಸರಕಾರದ ಈ ತೀರ್ಮಾನದಿಂದಾಗಿ ನಾಳೆ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯವನ್ನು ಸ್ಥಳಾಂತರ ಮಾಡಲೇಬೇಕಾದ ಅನಿವಾರ್ಯತೆ ಕೆಎಸ್‌ಸಿಐ ಮುಂದಿದೆ. ಮುಂದೆ ಐಪಿಎಲ್ ಪಂದ್ಯಗಳೀಗೆ ಅನುಮತಿ ಸಿಗುವುದು ಕೂಡ ಅನುಮಾನ ಎನ್ನಲಾಗಿದೆ.

