ಬೆಂಗಳೂರು: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಬಹುದಿನದ ನಿರೀಕ್ಷೆಯಂತೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಭಾಗದ ಜನರು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಮಾದರಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡುವಂತೆ ಬಹುದಿನಗಳಿಂದ ಹೋರಾಟ ನಡೆಸಿದ್ದರು. ಇದರ ಫಲವಾಗಿ ಇಂದು ಸರಕಾರ ಅಧಿಕೃತ ಆದೇಶದ ಮೂಲಕ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ನಾಮಕರಣ ಮಾಡಿದೆ.
ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಮೊದಲಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅನಂತರ ಅದು ನೆನಗುದಿಗೆ ಬಿದ್ದಿದ್ದು, ಕಿತ್ತೂರು ಉತ್ಸವಕ್ಕೆ ಆಗಮಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಹೆಸರು ಘೋಷಣೆ ಮಾಡಿದ್ದರು. ಇದೀಗ ಅಧಿಕೃತವಾಗಿ ಸರಕಾರದಿಂದ ಪ್ರಕರಣೆ ಹೊರಡಿಸಲಾಗಿದ್ದು, ಇನ್ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ.
