ಹುಬ್ಬಳ್ಳಿ: ಮಹಾಲಯ ಅಮಾವಾಸ್ಯೆ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ದಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 50 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಅ. 09 ರಂದು ಶುಕ್ರವಾರ, ಅ.10 ರಂದು ಎರಡನೇಯ ಶನಿವಾರ ಹಾಗೂ ಮಹಾಲಯ ಅಮವಾಸ್ಯೆ ಅ.11 ರಂದು ಭಾನುವಾರ ಇರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ತೆರಳಲು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
