ರಾಜಕೀಯ ಸುದ್ದಿ

ವಿದ್ಯಾರ್ಥಿಗಳ ಹಿತಕ್ಕಿಂತ ಯಾವುದೂ ದೊಡ್ಡದ್ದಲ್ಲ: ನೀಟ್ ಅಕ್ರಮ ವಿಚಾರಣೆಗೆ ಫಾಸ್ಟ್‌ ಟ್ರ್ಯಾಕ್ ಕೋರ್ಟ್ ಘೋಷಣೆ ಮಾಡಿದ ಪ್ರಧಾನಿ

Share It

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರಕಾರ ನೀಟ್ ಅಕ್ರಮ ವಿಚಾರಣೆಗೆ ಫಾಸ್ಟ್‌ ಟ್ರ್ಯಾಕ್ ನ್ಯಾಯಾಲಯ ರಚನೆಯ ತೀರ್ಮಾನ ಮಾಡಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ನಮಗೆ ಯಾವುದೂ ದೊಡ್ಡದಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ವಿದ್ಯಾರ್ಥಿಗಳ ಕಲ್ಯಾಣಕ್ಕಿಂತ ನಮಗೆ ಯಾವುದೂ ಮುಖ್ಯವಲ್ಲ. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ಕೊಡಿಸುವುದು ನಮ್ಮ ಆಧ್ಯತೆಯಾಗಿದೆ. ಇದಕ್ಕಾಗಿ ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಕೇಂದ್ರ ಸರಕಾರ ಸಿದ್ಧವಿದೆ ಎಂದು ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಜಂತರ್ ಮಂತರ್‌ನಲ್ಲಿ ಲಕ್ಷಾಂತರ ಜನರು ಜಮಾವಣೆಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ, ರೈತರು ಪ್ರತಿಭಟನೆಗೆ ಧುಮುಕಿದ್ದಾರೆ. ಈ ನಡುವೆ ವಿಪಕ್ಷಗಳ ಸಂಸತ್‌ನಲ್ಲಿ ಧರಣಿ ಆರಂಭಿಸಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಮೋದಿ ಅವರು, ಈ ಮಹತ್ವದ ನಿರ್ಧಾರ ಹೊರಡಿಸಿದ್ದಾರೆ.


Share It

You cannot copy content of this page