ಸುದ್ದಿ

ಹಾಸ್ಟೆಲ್ ಕಟ್ಟಡದಿಂದ ಜಿಗಿದು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Share It

ಬೆಂಗಳೂರು: ಹಾಸ್ಟೆಲ್ ಕಟ್ಡಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಚಿಕ್ಕಬಾಣಾವರ ಸಮೀಪದ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯಾದ ಕೇರಳ ಮೂಲದ ಅತಲ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಹಾಸ್ಟೆಲ್‌ನಲ್ಲಿ ವಾಸವಿದ್ದರು.

ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಆಕೆಗೆ ಹೊಂದಾಣಿಕೆಯಾಗಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆಕೆ ತಾಯಿಯೊಂದಿಗೆ ಮಾತನಾಡಿ ತಾನು ವಾಪಸ್ ಬರುವುದಾಗಿ ತಿಳಿಸಿದ್ದರು. ಆದರೆ, ತಾಯಿ ಸಮಾಧಾನಪಡಿಸಿ, ಎಲ್ಲವೂ ಸರಿಹೋಗುತ್ತದೆ. ಸ್ವಲ್ಪ ದಿನ ಇರು ಎಂದು ಹೇಳಿದ್ದಂತೆ.

ಇದರಿಂದ ಬೇಸರಗೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Share It

You cannot copy content of this page