ದೇಶವನ್ನೇ ತಲ್ಲಣಗೊಳಿಸಿರುವ ರಾಜ್ಯದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ.
ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಮತ್ತು ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಸಂಬಂಧಿ ಸುರೇಶ್ ಬಾಬು ಅವರನ್ನು ಬಂಧಿಸಲಾಗಿದೆ. ಸದ್ಯ ಬಂಧಿತ ಸುರೇಶ್ ಬಾಬು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.