ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರನ್ನು ಪರೀಕ್ಷೆ ಬರೆಯಲು ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಎದುರಿನಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿಯರು ಗಾಯಗೊಂಡಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯರನ್ನು ಐಶ್ಚರ್ಯಾ ಪ್ರೀತಿ, ಶ್ವೇತಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯರಿಗೆ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ತೆಲಂಗಾಣ ರಿಜಿಸ್ಟ್ರೇಷನ್ ಹೊಂದಿದ್ದು, ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ವಿಜಯಪುರ ಗ್ರಾಮಾಂತರ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ಪರೀಶೀಲನೆ ನಡೆಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯರಿಗೆ ಪರ್ಯಾಯ ಮಾರ್ಗದ ಚಿಂತನೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.