ಬೆಂಗಳೂರು: ಇಂದು ರಾತ್ರಿ ನಗರದ ಪಶ್ಚಿಮ ವಿಭಾಗದ ಪೊಲೀಸರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-9 ಆರೋಪಿಯಾಗಿ ತಲೆಮರೆಸಿಕೊಂಡಿದ್ದ ರಾಜು ಅಲಿಯಾಸ್ ಧನರಾಜ್ ನನ್ನು ಬಂಧಿಸಿದ್ದಾರೆ.
ನಗರದ ನಾಗರಬಾವಿ ಬಳಿಯಿರುವ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-9 ಆರೋಪಿಯಾಗಿದ್ದ ರಾಜು ಅಲಿಯಾಸ್ ಧನರಾಜ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ದರು.
ಬಂಧಿತ ರಾಜು ಅಲಿಯಾಸ್ ಧನರಾಜ್ ಎ-5 ಆರೋಪಿಯಾಗಿರುವ ದಿನೇಶ್ ಜೊತೆ ಸೇರಿ ರೇಣುಕಾಸ್ವಾಮಿಯನ್ನು ಎಲೆಕ್ಟ್ರಿಕ್ ಮೆಗ್ಗನ್ ಡಿವೈಸ್ ನಿಂದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಅಮಾನವೀಯವಾಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದಾರೆ.
ಎ-5 ಆರೋಪಿ ನಂದೀಶ್ ಈಗಾಗಲೇ ಅದರ ಆಗಿದ್ದು ವಿಚಾರಣೆಗೆ ಒಳಪಟ್ಟಿದ್ದಾನೆ. ಎ-9 ಆರೋಪಿ ರಾಜು ಅಲಿಯಾಸ್ ಧನರಾಜ್ ಬಂಧನದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟಾರೆ ಈವರೆಗೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದಂತಾಗಿದೆ.

