ಬೆಂಗಳೂರು;
ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೊಬೈಲ್ ಮೆಸೇಜ್ ಕಳಿಸಿದ್ದಕ್ಕೆ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಟನನ್ನು ಪ್ರದೋಶ್ ಆಗಿದ್ದು, ಈತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ 14ನೇ ಆರೋಪಿಯಾಗಿದ್ದಾನೆ. ಬಂಧಿತ ನಟ ಪ್ರದೋಶ್ ದರ್ಶನ್ ತೂಗುದೀಪ್ ಸೂಚನೆಯಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರದೋಶ್ ದರ್ಶನ್ ತೂಗುದೀಪ್ ನಾಯಕನಾಗಿ ನಟಿಸಿದ್ದ ಬೃಂದಾವನ, ಬುಲ್ ಬುಲ್ ಚಿತ್ರಗಳಲ್ಲಿ ನಟಿಸಿದ್ದಾನೆ. ಸದ್ಯ ಪ್ರದೋಶ್ ನನ್ನು ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.

