ಹೊನ್ನಾವರ: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಇತ್ತೀಚಿಗೆ ನಡೆದಿತ್ತು. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಪಲ್ಟಿಯಾಗಿತ್ತು.
ಮೈಸೂರಿನ ಪವನ್ (15) ಸ್ಥಳದಲ್ಲೇ ಮೃತಪಟ್ಟಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿತ್ತು.

