ರಾಜ್ಯದಲ್ಲಿ ಮುಂದಿನ ಸೋಮವಾರ ಮೇ 3 ರಂದು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟಾರೆ 6 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮೇ 3 ರಂದು ರಾಜ್ಯದ ಪದವೀಧರ ಮತದಾರರು ಮತ್ತು ಶಿಕ್ಷಕರಿಗೆ ವಿಶೇಷ ರಜೆ ಘೋಷಿಸಿ ರಾಜ್ಯಸರ್ಕಾರ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಈ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ-ಜೆಡಿಎಸ್ ಪಕ್ಷಗಳ ಎನ್.ಡಿ.ಎ ಮೈತ್ರಿಕೂಟ ಪರವಾಗಿ 6 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಗೆಲುವಿಗಾಗಿ ಜೋರಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಆದಾಗ್ಯೂ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಪಕ್ಷಗಳ ಬಂಡಾಯ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಫಲಿತಾಂಶ ತಿರುಗುಮುರುಗು ಮಾಡುವ ಭೀತಿ ಸೃಷ್ಟಿಸಿದ್ದಾರೆ.
