ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಮತ್ತೇ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಎ-1 ಪವಿತ್ರಾ ಗೌಡ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲು ಸೇರಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಗ್ಯಾಂಗ್ ಬಂಧಿಸಿ,10 ದಿನಗಳಿಂದ ಪೊಲೀಸರು ವಿಚಾರಣೆ ನಡೆಸಿದ್ದರು. ಇಂದಿಗೆ ಕಸ್ಟಡಿ ಅವಧಿ ಮುಗಿದ ಕಾರಣಕ್ಕೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರು ಜನರನ್ನು ಹೊರತುಪಡಿಸಿ ಉಳಿದೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎ-1 ಆರೋಪಿ ಪವಿತ್ರಾ ಗೌಡ, ಪವನ್, ವಾಹನ ಚಾಲಕ ರವಿಶಂಕರ್, ಚಿತ್ರದುರ್ಗದಿಂದ ಕಿಡ್ನಾಪ್ ಮಾಡಲು ಸಹಕರಿಸಿದ್ದ ಅನುಕುಮಾರ್, ನಿಖಿಲ್ ನಾಯ್ಕ್, ಸೇರಿದಂತೆ ಉಳಿದೆಲ್ಲ ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಅವರೆಲ್ಲರನ್ನು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗುತ್ತದೆ.
ನಟ ದರ್ಶನ್, ಧನರಾಜ್, ನಾಗರಾಜ್, ವಿನಯ್, ಪ್ರದೋಶ್, ಲಕ್ಷ್ಮಣ್ ಅವರನ್ನು ಪೊಲೀಸ್ ಕಸ್ಟಡಿಗೆ ಕೊಡುವಂತೆ ವಕೀಲರು ಮನವಿ ಮಾಡಿಕೊಂಡಿದ್ದು, ಈ ಬಗ್ಗೆ ಸೂಕ್ತ ವಾದ ಮಂಡನೆಗೆ ಅವಕಾಶ ಮಾಡಿಕೊಟ್ಟಿದ್ದರು. ಇವರನ್ನು ಯಾವ ಕಾರಣಕ್ಕೆ ಕಸ್ಟಡಿಗೆ ಕೊಡಬೇಕು ಎಂದು ವಕೀಲರು ಸಮರ್ಥವಾಗಿ ವಾದ ಮಂಡಿಸಿದರು.
updating…

