ಅಪರಾಧ ಸುದ್ದಿ

3.5 ಲಕ್ಷ ಲಂಚ ಪಡೆಯುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Share It

ದೇವನಹಳ್ಳಿ: ರೆಸ್ಟೋರೆಂಟ್ ಲೈಸೆನ್ಸ್ ರಿನ್ಯೂವಲ್ ಮಾಡಿಕೊಡುವ ಸಲುವಾಗಿ ಹೋಟೆಲ್ ಮಾಲೀಕರಿಂದ ಲಂಚ ಸ್ವೀಕರಿಸುವಾಗ ಅರಳು ಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಅರಳು ಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರೆಸ್ಟೋರೆಂಟ್‌ವೊAದರ ಪರವಾನಗಿ ನವೀಕರಣ ಮಾಡಬೇಕಿತ್ತು. ಇದಕ್ಕಾಗಿ ಅರಳುಮಲ್ಲಿಗೆ ಗ್ರಾಮ ಪಂಚಾಐಇತಿ ಅಭಿವೃದ್ಧಿ ಅಧಿಕಾರಿ ನಿರಂಜನ್ ೩.೫ ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚದ ಹಣದ ಸಮೇತ ಆಗಮಿಸಿದ್ದ ಹೊಟೇಲ್ ಮಾಲೀಕರು, ಆತನನ್ನು ಲೋಕಾಯುಕ್ತ ಬಲೆಗೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿಯೇ ೩.೫ ಲಕ್ಷ ರು. ಲಂಚ ಪಡೆಯುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪಿಡಿಒ ನಿರಂಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ.


Share It

You cannot copy content of this page