ಬೆಂಗಳೂರು: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8 ರವರೆಗೆ ಒಟ್ಟು 4 ದಿನಗಳವರೆಗೆ ಮುಚ್ಚಲಾಗಿದೆ. ಕೇಬಲ್ ಅಳವಡಿಕೆ ದುರಸ್ತಿ ಕಾರ್ಯ ಮತ್ತು ಫ್ಲೈಓವರ್ ಲೋಡ್ ಪರೀಕ್ಷೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಪೀಣ್ಯ ಫ್ಲೈಓವರ್ ಮುಚ್ಚಿರುವುದರಿಂದ, ತುಮಕೂರು ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ಗೋರಗುಂಟೆಪಾಳ್ಯದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿರುವ ವಾಹನ ಸವಾರರು ತಮ್ಮ ಸ್ಥಳಗಳನ್ನು ತಲುಪಲು ಪರದಾಡುತ್ತಿದ್ದಾರೆ. ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರು ಅನಗತ್ಯ ವಿಳಂಬ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

