ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಿಗೆ ಬಂಧನದ ಭೀತಿ ಎದುರಾಗಿದ್ದು, ತಲೆ ಮರೆಸಿಕೊಂಡು ಓಡಾಡುತ್ತಿರುವ ಅವರು, ಜಾಮೀನು ಪಡೆಯಲು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಆದರೆ, ಹೈಕೋರ್ಟ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡುವ ಮೂಲಕ ಅವರ ಆತಂಕವನ್ನು ಹೆಚ್ಚಿಸಿದೆ. ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಅನ್ನು ಹಂಚಿಕೆ ಮಾಡಿದ ಆರೋಪದಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಪ್ರಜ್ವಲ್ ಮಾಜಿ ಕಾರು ಡ್ರೈವರ್ ಕಾರ್ತಿಕ್ ಗೌಡ, ಚೇತನ್ ಗೌಡ, ಕಾಂಗ್ರೆಸ್ ಮುಖಂಡ ಪುಟ್ಟಿ ಆಲಿಯಾಸ್ ಪುಟ್ಟರಾಜು ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಇವರು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 28 ಕ್ಕೆ ಮುಂದೂಡಿದೆ. ಮೇ. 28 ಕ್ಕೆ ಈ ಮೂವರಿಗೆ ಜಾಮೀನು ನೀಡದಿದ್ದರೆ, ಇವರೆಲ್ಲರೂ ಅನಿವಾರ್ಯವಾಗಿ ಸಿಸಿಬಿ ಮುಂದೆ ಶರಣಾಗಬೇಕಾದ ಅನಿವಾರ್ಯತೆ ಇದೆ.