ಬೆಂಗಳೂರು: ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಜರ್ಮನಿಯ ಮ್ಯೂನಿಚ್ ನಗರದಿಂದ ಬೆಂಗಳೂರಿಗೆ ವಾಪಸ್ಸಾಗಲು ಟಿಕೆಟ್ ಬುಕ್ ಮಾಡಿದ್ದಾರೆ ಎಂಬ ನ್ಯೂಸ್ ವೈರಲ್ ಆಗಿತ್ತು.
ಆದರೆ ಪ್ರಜ್ವಲ್ ರೇವಣ್ಣ ಯುಎಎ ರಾಜಧಾನಿ ದುಬೈ ನಗರದಲ್ಲಿದ್ದಾರೆಂಬ ಮಾಹಿತಿ ಸಿಕ್ಕಿದೆ. ದುಬೈ ನಗರದ ಆಲ್ಮೈರಾ ಜುಮೈರಾ ಹೋಟೆಲ್ ನಲ್ಲಿ ಹಾಸನದ ಹುಡುಗರೊಂದಿಗೆ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ಪ್ರತಿ ಬಾರಿ ಪ್ರಜ್ವಲ್ ಗೆ ಹಾಸನದ ಹುಡುಗರೇ ಊಟ, ತಿಂಡಿ ಸರಬರಾಜು ಮಾಡುತ್ತಿದ್ದಾರೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಹೇಗೊ ತಿಳಿದುಬಂದಿದೆ.
ಇಷ್ಟಾದರೂ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್ ನಗರದಿಂದ ವಿಮಾನದಲ್ಲಿ ನಿರ್ಗಮಿಸಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಅಂದರೆ ಗುರುವಾರ ಮಧ್ಯರಾತ್ರಿ 12:30 ಕ್ಕೆ ಬಂದಿಳಿಯಲು ಟಿಕೆಟ್ ಬುಕ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ಐಟಿ ತನಿಖಾ ತಂಡ ರೆಡಿಯಾಗಿದೆ. ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಲ್ಲಿ ಇಂದು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 31 ರಂದು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಇದರಿಂದ ಪ್ರಜ್ವಲ್ ರೇವಣ್ಣ ಅವರು ಮೇ 31 ರಂದು ಬೆಂಗಳೂರಿಗೆ ವಾಪಸ್ ಬರುವುದು ಇನ್ನೂ ಖಚಿತವಾಗಿಲ್ಲ.
ರೇವಣ್ಣ ದಂಪತಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮತ್ತೊಂದೆಡೆ ಶಾಸಕ ಎಚ್.ಡಿ.ರೇವಣ್ಣ ಮತ್ತು ಪತ್ನಿ ಭವಾನಿ ರೇವಣ್ಣ ಅವರ ಪ್ರತ್ಯೇಕ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮೇ 31 ಕ್ಕೆ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.
