ಸುದ್ದಿ

ಎಸ್‌ಸಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಅರ್ಜಿ:ಸರಕಾರಕ್ಕೆ ನೊಟೀಸ್

Share It

ಬೆಂಗಳೂರು: ಕರ್ನಾಟಕದಲ್ಲಿರುವ ಕೆಲವು ಸ್ಪೃಶ್ಯ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬAಧಿಸಿ ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ಹೈಕೋರ್ಟ್ ನೊಟೀಸ್ ನೀಡಿದೆ.

ಲಂಬಾಣಿ (ಬಂಜಾರ), ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಸ್ಪೃಶ್ಯ ಜಾತಿಗಳೆಂದು ಗುರುತಿಸಲಾಗಿದೆ. ಹೀಗಾಗಿ, ಈ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡಬೇಕು ಎಂದು ರಾಯಚೂರು ಜಿಲ್ಲೆಯ ಸಿವಿಲ್ ಎಂಜಿನಿಯರ್ ಆದ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತೀಯ ಜನಗಣತಿ ಆಯುಕ್ತರು ಮತ್ತು ಪ್ರಧಾನ ರಿಜಿಸ್ಟ್ರಾರ್, ರಾಷ್ಟ್ರೀಯ ಪರಿಶಿಷ್ಟಜಾತಿಗಳ ಆಯೋಗ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಚುಣಾವಾಣಾ ಆಯೋಗದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ.

ಆಯೋಗವು ಮನವಿಯನ್ನು ಪರಿಶೀಲಿಸಿ ಸಂಬAಧಪಟ್ಟ ಪ್ರಾಧಿಕಾರವಾದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ೨೦೨೦ರ ಫೆ.೧೪ರಂದು ಆದೇಶಿಸಿತ್ತು. ಅಲ್ಲದೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದು, ಅದನ್ನು ಆಧರಿಸಿ ೨೦೨೦ರ ಮಾ.೧೨ರಂದು ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಪರಿಶಿಷ್ಟ ಜಾತಿಯೇತರರನ್ನು ಕೈ ಬಿಡುವ ಕುರಿತು ಪ್ರಸ್ತಾವನೆ ಕಳಿಸುವಂತೆ ತಿಳಿಸಿತ್ತು. ಆದರೆ, ಕರ್ನಾಟಕ ಸರ್ಕಾರ ಪ್ರಸ್ತಾವನೆ ಕಳಿಸಲಿಲ್ಲ. ನಂತರ ಇದೇ ಮಾದರಿಯ ಪತ್ರವನ್ನು ೨೦೨೦ರ ಮೇ ೧೪ ರಂದು ಮತ್ತೆ ಆಯೋಗದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿತ್ತು. ಆ ನಂತರ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಮಾಡಲಾಗಿತ್ತು.

ಅಂತಿಮವಾಗಿ ೨೦೨೩ರ ಫೆ.೧೬ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆಯೋಗಕ್ಕೆ ಪತ್ರ ಬರೆದು, ಈ ನಾಲ್ಕು ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿಯೇ ಉಳಿಸುವುದಾಗಿ ತಿಳಿಸಿದ್ದರು. ನಂತರ ೨೦೨೩ರ ಜು.೨೪ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ವಿಚಾರದಲ್ಲಿ ಸೂಕ್ತ ಪರಿಹಾರಕ್ಕಾಗಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸುಪ್ರೀಂ ಸೂಚಿಸಿತ್ತು. ಅದರಂತೆ ಅರ್ಜಿ ಸಲ್ಲಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ಸರ್ಕಾರ ಹಾಗೂ ಆಯೋಗದಿಂದ ಪಡೆದುಕೊಳ್ಳಬೇಕು. ಲಂಬಾಣಿ(ಬAಜಾರ), ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಕರ್ನಾಟಕದ ಪರಿಶಿಷ್ಟ ಜಾತಿ(ಎಸ್ಸಿ)ಗಳ ಪಟ್ಟಿಯಿಂದ ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


Share It

You cannot copy content of this page