ನನಗೆ ಕನ್ನಡಿಗರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ: ಫೋನ್ ಪೇ ಸಿಇಒ ಕ್ಷಮೆಯಾಚನೆ
ಬೆಂಗಳೂರು : ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು. ಹೀಗಾಗಿ ಕರ್ನಾಟಕದಲ್ಲಿ ಕನ್ನಡಿಗರೆಲ್ಲಾ ರೊಚ್ಚಿಗೆದ್ದು ಫೋನ್ ಪೇ ಮೊಬೈಲ್ ಆಪ್ ಬಳಸದೆ ನಿನ್ನೆ ಒಂದು ದಿನ ಬಾಯ್ಕಾಟ್ ಬಿಸಿ ಮುಟ್ಟಿಸಿದ್ದರು. ಇದೀಗ ಖುದ್ದು ಫೋನ್ ಪೇ ಸಿಇಒ ಸಮೀರ್ ನಿಗಮ್ ಅವರು
ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್, ಕರ್ನಾಟಕ, ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆಯಾಚಿಸುವೆ. ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.