ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದ
ಆರೋಪಿ ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿವೆ. ಹಾಗಾಗಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಕೊಡುವುದಾಗಿ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.
ಸದ್ಯ ಪೋಸ್ಟರ್ ಅಂಟಿಸಿದ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಹುಮಾನ ಘೋಷಿಸಿ ಅಂಟಿಸಿದ್ದ ಪೋಸ್ಟರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ.