ಬೆಂಗಳೂರು: ಆನೇಕಲ್ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿದ್ದ ಸ್ಫಾಗಳಿಗೆ ಪೊಲೀಸರು ಬೀಗ ಜಡಿದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಎಸ್.ಪಿ. ಚಂದ್ರಕಾಂತ ಆದೇಶದ ಅನ್ವಯ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಆನೇಕಲ್ ತಾಲೂಕಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪದಲ್ಲಿ 20 ಕ್ಕೂ ಹೆಚ್ಚು ಸ್ಪಾಗಳೀಗೆ ಬೀಗ ಹಾಕಿಸಿದ್ದಾರೆ.
ಜಿಗಣಿ ವ್ಯಾಪ್ತಿಯಲ್ಲಿ 1 ಸರ್ಜಾಪುರ ಠಾಣಾ ವ್ಯಾಪ್ತಿಯಲ್ಲಿ 2, ಸೂರ್ಯನಗರದಲ್ಲಿ 8 ಮತ್ತು ಅತ್ತಿಬೆಲೆಯಲ್ಲಿ 10 ಸ್ಫಾಗಳಿಗೆ ಬೀಗ ಜಡಿಯಲಾಗಿದೆ. ಪೊಲೀಸರ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸ್ಪಾಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

