ಉಪಯುಕ್ತ ಸುದ್ದಿ

ಪೊಲೀಸ್ ಸಿಬ್ಬಂದಿ ಗುಡ್ ನ್ಯೂಸ್ ; ಬರ್ತಡೇ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಕಡ್ಡಾಯ

Share It

ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಕಾನ್ಸ್‌ ಟೇಬಲ್ ಮತ್ತು ಎಎಸ್‌ಐಗಳಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಗಳಿಗೆ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ.

ಈ ಕುರಿತು ಸರಕಾರದ ತೀರ್ಮಾನದಂತೆ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಕಾನ್ಸ್‌ಟೇಬಲ್ ನಿಂದ ಎಎಸ್‌ಐ ವರೆಗಿನ ಸಿಬ್ಬಂದಿಗೆ ಹುಟ್ಟುಹಬ್ಬ,ಮ ವಾರ್ಷಿಕೋತ್ಸವದ ನೀಡುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ತನ್ನ ಹುಟ್ಟು ಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವವನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಿದ ಸಿಬ್ಬಂದಿಗೆ ಯಾವುದೇ ಸಬೂಬು ಹೇಳದೆ ರಜೆ ನೀಡುವುದು ಕಡ್ಡಾಯ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಇದರಿಂದ ರಜೆಯೇ ಇಲ್ಲದೆ ದುಡಿಯುತ್ತಿದ್ದ ಪೊಲೀಸ್ ಸಿಬ್ಬಂದಿಯ ಬಹುದಿನದ ಕನಸು ಈಡೇರಿದಂತಾಗಿದೆ.


Share It

You cannot copy content of this page