ಸುದ್ದಿ

ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಸಾಧ್ಯತೆ: ಮುಂಜಾಗೃತಾ ಕ್ರಮಕ್ಕೆ ಎಸ್ಕಾಂಗಳ ತೀರ್ಮಾನ

Share It

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯಗಳಾಗುವ ಸಾಧ್ಯತೆಗಳಿದ್ದು, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸೂಚನೆ ನೀಡಿದ ಸಿಎಂ ಮಳೆ ಕೊರತೆಯಿಂದ ಜಲವಿದ್ಯುತ್ ಉತ್ಪಾದನೆ ಕಡಿತಗೊಳ್ಳುವ ಸಾಧ್ಯತೆಯಿದ್ದು, ಸೂಕ್ತ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಹಂತದಲ್ಲಿದ್ದು, ವಿದ್ಯುತ್ ಕೊರತೆಯೂ ಕಾಡುವ ಸಾಧ್ಯತೆಯಿದೆ. ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕಷ್ಟೇ ಬಳಕೆ ಮಾಡುವಂತೆ ಸರಕಾರ ಸೂಚನೆ ನೀಡಿದೆ.


Share It

You cannot copy content of this page