-ಸತತ 5ನೇ ಬಾರಿ ಕಣದಲ್ಲಿ: ನಾಮಪತ್ರ ಸಲ್ಲಿಕೆ ವೇಳೆ ಬಿಎಸ್ ವೈ, ಪ್ರಭಾಕರ್ ಕೋರೆ ಸಾಥ್
-ಧಾರವಾಡದ ಶಿವಾಜಿ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಬೃಹತ್ ಮೆರವಣಿಗೆ
-ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಕೆ
ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಸತತ 5ನೇ ಬಾರಿ ಸ್ಪರ್ಧೆ ಬಯಸಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಏ.15ರಂದು ರಾಜ್ಯ ಬಿಜೆಪಿ ವರಿಷ್ಟ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಸಾಗಿ ಸಚಿವ ಪ್ರಹ್ಲಾದ ಜೋಶಿ ಅವರು ಅಧಿಕೃತವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಧಾರವಾಡ ಶಿವಾಜಿ ಸರ್ಕಲ್ ನಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ವೀರಶೈವ ಸಮಾಜದ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ್ ಕೋರೆ ಉಪಸ್ಥಿತರಿದ್ದು ಜೋಶಿ ಅವರಿಗೆ ಸಾಥ್ ನೀಡಲಿದ್ದಾರೆ.
ಶಾಸಕ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಶಂಕರಣ್ಣ ಮುನವಳ್ಳಿ ಮುಂತಾದ ಪ್ರಮುಖರು ಅಭ್ಯರ್ಥಿ ಜೋಶಿ ಅವರ ಜತೆಗಿರುವರು.
ಧಾರವಾಡದ ಶಿವಾಜಿ ವೃತ್ತದಿಂದ ಬೆಳಗ್ಗೆ 10 ಗಂಟೆಗೆ ಬೃಹತ್ ಮೆರವಣಿಗೆ ಆರಂಭ ವಾಗಲಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ.
ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.