ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಇಂದು ಭಾರೀ ಆಘಾತ ಉಂಟಾಗಿದೆ.
ಪ್ರಜ್ವಲ್ ರೇವಣ್ಣ ಅವರು 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ನ್ಯಾಯ ಪೀಠವು ಇಂದು ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತು.
ಇದರಿಂದ ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ದಿನಗಳ ಕಾಲ ಜೈಲು ವಾಸ ಖಾಯಂ ಆಗಿದೆ.