ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬAಧಪಟ್ಟ ವಿಡಿಯೋಗಳನ್ನು ಮಾರ್ಪಿಂಗ್ ಮಾಡಿ, ಪೆನ್ ಡ್ರೈವ್ ನಲ್ಲಿ ಸಂಗ್ರಹಿಸಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧ ಎಸ್ ಐಟಿ ಪೊಲೀಸರು ಇಬ್ಬರಿಗೆ ನೊಟೀಸ್ ನೀಡಿದ್ದಾರೆ.
ನೋಟೀಸ್ ಸಿಕ್ಕಿದ ೨೪ ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿರುವ ಪೊಲೀಸರು, ಏ.೨೩ ರಂದು ಪ್ರಜ್ವಲ್ ಸಹಾಯಕ ಪೂರ್ಣಚಂದ್ರ ತೇಜಸ್ವಿ ನೀಡಿದ ದೂರಿನ ಅನ್ವಯ ಕಾರು ಚಾಲಕ ಕಾರ್ತಿಕ್ ಹಾಗೂ ದೇವರಾಜೇಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಜ್ವಲ್ ಕಾರು ಚಾಲಕನಾಗಿದ್ದ ಕಡುವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ಲಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಇದೀಗ ಎಸ್‌ಐಟಿ ಪೊಲೀಸರು ಪ್ರಕರಣ ಕೈಗೆತ್ತಿಕೊಂಡಿದ್ದು, ಮೂಲ ಮಾಹಿತಿ ಸಂಗ್ರಹಕ್ಕೆ ಕೈ ಹಾಕಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ರಾಜಕೀಯ ಪ್ರೇರಿತ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆಯೂ ತನಿಖೆ ನಡೆಯಲಿದೆ. ವಿಡಿಯೋಗೆ ಸಂಬಂಧ ಈವರೆಗೆ ಆಗಿರುವ ಬೆಳವಣಿಗೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾರ್ಪಿಂಗ್ ಮಾಡಿರುವ ವಿಡಿಯೋಗಳನ್ನು ಹಂಚಿಕೊAಡವರ ಬಗ್ಗೆಯೂ ತನಿಖೆ ನಡೆಯುತ್ತಿದೆ.