ಬೆಂಗಳೂರು: ಡಿ ಗ್ಯಾಂಗ್ ಕೊಲೆ ಪ್ರಕರಣದ ನಡುವೆ ಸದ್ದಿಲ್ಲದೆ ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಇಂದು ಮತ್ತೇ ನ್ಯಾಯಾಲಯಲದ ಮುಂದೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಅವರು, ವಿದೇಶದಿಂದ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಅವರನ್ನು ತಮ್ಮ ವಶಕ್ಕೆ ಪಡೆದಿದ್ದರು. ಇದರಿ ಎರಡು ಪ್ರಕರಣದಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿರುವ ಪೊಲೀಸರು, ಇಂದು ಮತ್ತೇ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಮಾಡಲಿದ್ದಾರೆ.
ಹೊಳೇನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳ ವಿಚಾರಣೆಯನ್ನು ಎಸ್‌ಐಟಿ ಅಂತ್ಯಗೊಳಿಸಿದೆ. ಆದರೆ, ಎಸ್‌ಐಟಿಯಲ್ಲಿ ಒಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ವಿಚಾರಣೆಗಾಗಿ ಪ್ರಜ್ವಲ್ ಅವರನ್ನು ಮತ್ತೇ ಪೊಲೀಸ್ ಕಸ್ಟಡಿಗೆ ಪಡೆಯಲು ಎಸ್‌ಐಟಿ ಚಿಂತನೆ ನಡೆಸಿದೆ. ಈ ಸಂಬAಧ ಪೊಲೀಸ್ ಪರ ವಕೀಲರು ನ್ಯಾಯಾಲಯವನ್ನು ಕೋರಲಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಅವರ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಜೂನ್ ೧೦ ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರಿಗೆ ೧೪ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ, ವಿಚಾರಣೆಗೆ ಜೂನ್ ೧೨ ರಂದು ಎಸ್‌ಐಟಿ ಬಾಡಿ ವಾರಂಟ್ ಆಧಾರದಲ್ಲಿ ಅವರನ್ನು ವಶಕ್ಕೆ ಪಡೆದಿತ್ತು.

