ಸಕಲೇಶಪುರ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಎಸ್‌ಐಎ ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಟ್ಟೂರುವಿನ ಪ್ರವೀಣ್ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿದ್ದ. ಕೊಲೆ ಮಾಡಿದವರ ಶೋಧಕ್ಕಾಗಿ, ಪೊಲೀಸರು ಬಲೆ ಬೀಸಿದ್ದರು. ಈ ನಡುವೆ ಕೊಲೆಗೆ ಕೋಮುದ್ವೇಷ ಮತ್ತು ಉಗ್ರ ಸಂಘಟನೆಗಳ ನಂಟಿದೆ ಎಂಬ ಅಂಶ ಬೆಳಕಿಗೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಎನ್‌ಐಎಗೆ ಪ್ರಕರಣವನ್ನು ಹಿಂದಿನ ಬಿಜೆಪಿ ಸರಕಾರ ವಹಿಸಿತ್ತು. ಪ್ರಕರಣದ ತನಿಖೆ ಆರಂಭಿಸಿದ್ದ ಎನ್‌ಐಎ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು. ಈಗ ಸಕಲೇಶಪುರದ ಆನೆಮಹಲ್ ಬಳಿ, ತೋಟದಲ್ಲಿದ್ದ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ.
ಪ್ರಕರಣದಲ್ಲಿ ಮುಸ್ತಪಾ ಮತ್ತು ಇಲ್ಯಾಸ್ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರು ಆರೋಪಿಗಳು ಆನೆಮಹಲ್ ಬಳಿ ಸಿರಾಜ್ ಎಂಬುವವರ ತೋಟದಲ್ಲಿ ಶುಂಠಿ ಬೆಳೆಯುವ ನೆಪದಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಿರಾಜ್ನಿಂದ ಸಕಲೇಶಪುರ ಪೊಲೀಸರು ಮಾಹಿತಿ ಸಂಗ್ರಹಿಸಿ, ಎನ್‌ಐಎ ಜತೆಗೆ ಹಂಚಿಕೊಂಡಿದ್ದರು.
ಮಾಹಿತಿ ಮೇರೆಗೆ ಬಂಧನ ಮಾಡಿದ ಎನ್‌ಐಎ ಅಧಿಕಾರಿಗಳು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಚಾರಣೆಯಿಂದ ಪ್ರವೀಣ್ ಹತ್ಯೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಳು ಹೊರಬರುವ ಸಾಧ್ಯತೆಗಳಿವೆ