ಚಿತ್ರದುರ್ಗ: ರಾಹುಲ್ ಗಾಂಧಿ ಬರಲಿದ್ದಾರೆ ಎಂದು ರಾಜ್ಯಗಳು ಕಾಂಗ್ರೆಸ್ ನಾಯಕರು ಹೇಳಿದ್ದರು, ಆದರೆ ಬಂದಿದ್ದು ಪ್ರಿಯಾಂಕಾ ಗಾಂಧಿ ವಾದ್ರಾ. ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷದ ಸ್ಟಾರ್ ಪ್ರಚಾರಕಿ ಎಂದು ಗುರುತಿಸಿಕೊಳ್ಳುವ ಪ್ರಿಯಾಂಕಾ ಗಾಂಧಿ ಪಾಲ್ಗೊಂಡರು.
ಪ್ರಿಯಾಂಕಾ ಗಾಂಧಿ ಹೆಲಿಕಾಪ್ಟರ್ ತಪಾಸಣೆ!
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಮಂಗಳವಾರ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಯಾಣಿಸಿದ ಹೆಲಿಕಾಫ್ಟರ್ ಅನ್ನು ಚುನಾವಣಾಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಭಾಗವಹಿಸಲು ಪ್ರಿಯಾಂಕಾ ಗಾಂಧಿ ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್ಗೆ ಆಗಮಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ತಂಡ ಪ್ರಿಯಾಂಕಾ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು
ಪರಿಶೀಲನೆ ನಡೆಸಿತು.
ಈ ವೇಳೆ ತಹಶೀಲ್ದಾರ್ ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅನಂತರಾಜು ಹಾಗೂ ಎಫ್ಎಸ್ಟಿ ತಂಡದ ಅಧಿಕಾರಿಗಳು ಹಾಜರಿದ್ದರು.
ಬಳಿಕ ಪ್ರಿಯಾಂಕಾ ಗಾಂಧಿ
ಅವರ ಆಗಮನ ಕಾಂಗ್ರೆಸ್ ನಾಯಕರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತ್ತು. ಪ್ರಿಯಾಂಕಾ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ವೇದಿಕೆ ಹತ್ತುವುದನ್ನು ನೋಡಿ ಕೈ ಕಾರ್ಯಕರ್ತರು ಶಿಳ್ಳೆ ಹೊಡೆದು ಸ್ವಾಗತಿಸಿದರು. ಪ್ರಿಯಾಂಕಾ ಗಾಂಧಿ ಅವರು ವೇದಿಕೆಯ ಮೇಲೆ ಹಲವಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ಇದ್ದಾಗ ಅವರ ಜೊತೆ ವೇದಿಕೆ ಮೇಲೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಿ.ಎನ್ ಚಂದ್ರಪ್ಪ, ಮಾಜಿ ಸಚಿವ ಹೆಚ್. ಆಂಜನೇಯ, ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮೊದಲಾದವರು ಆಸೀನರಾಗಿದ್ದರು.
ಪ್ರಿಯಾಂಕಾ ಗಾಂಧಿ ಅವರು ತಮ್ಮ ಭಾಷಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳನ್ನು ಜನರಿಗೆ ತಿಳಿಸಿ, ಮುಂದೆ ದೇಶದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಖಚಿತವಾಗಿ ಜಾರಿಗೊಳಿಸಲು ಮೊದಲ ಆದ್ಯತೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಮಾಜಿ ಸಚಿವ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಇದೇ ಶುಕ್ರವಾರ ಏಪ್ರಿಲ್ 26 ರಂದು ನಡೆಯಲಿದೆ.