ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ತೀರ್ಮಾನಿಸಿದೆ.
ಅಗ್ಸರ್ ಕೊಪ್ಪ ಎಂಬಾತ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕನ್ನಡದಲ್ಲಿಯೇ ಬರೆದುಕೊಂಡಿದ್ದ. ಜತೆಗೆ, ಆತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಯೂ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದಾ? ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶವನ್ನು ಉಂಟು ಮಾಡಿತ್ತು.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೊಪ್ಪ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿ ಅಗ್ಸರ್‌ನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇದೀಗ ಎನ್ ಆರ್. ಪುರ ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.