ನವದೆಹಲಿ: ಪ್ರತಿಭಟನಾನಿರತ ಯುವಜನತೆಯ ಮೇಲೆ ಲಾಠಿ ಚಾರ್ಜ್ ನಡೆಸಿದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದರು. ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರನ್ನು ಬಂಧಿಸಿದರು.
ರಾಹುಲ್ ಗಾಂಧಿ ಜತೆಗೆ ಸಂಸದೆ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪ್ರತಿಭಟನಾ ಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

