ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಾಡಹಗಲೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಖಂಡಿಸಿ ನಾಳೆ ಸೋಮವಾರ ರಾಜ್ಯ ಬಿಜೆಪಿ ಘಟಕ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.
ಈ ಬಗ್ಗೆ ಇಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು “ಹುಬ್ಬಳ್ಳಿಯಲ್ಲಿ ಹಾಡಹಗಲೇ ರಸ್ತೆಯಲ್ಲಿಯೇ ಎಂ.ಸಿ.ಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಳನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸುವಂತೆ ಆಯಾ ಬಿಜೆಪಿ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳಿಗೆ ಕರೆ ನೀಡುತ್ತಿದ್ದೇವೆ ಎಂದು ಹೇಳಿದರು.