ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ವದಂತಿಗಳ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ರಾಜ್ಯಾದ್ಯಂತ ನಾಳೆಯಿಂದಲೇ ಹೋರಾಟ ಪ್ರಾರಂಭಿಸಲಾಗುವುದು ಎಂದು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಹಿಂದ ವರ್ಗಗಳ ಅಧ್ಯಕ್ಷ ರಾಮಚಂದ್ರಪ್ಪ, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗುತ್ತಿದೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬಾರದು. ಒಂದು ವೇಳೆ ಬಲವಂತದಿಂದ ರಾಜೀನಾಮೆ ಪಡೆದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಿದ್ದರಾಮಯ್ಯ ಎರಡು ಅವಧಿಯಲ್ಲು ಅತ್ಯುತ್ತಮ ಆಡಳಿತ ನೀಡಿದ್ದಾರೆ. ರಾಜ್ಯದ ಬಡಜನರ ಪರವಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಅಹಿಂದ ವರ್ಗಗಳ ಏಳಿಗೆಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಹೀಗಾಗಿ, ಅವರ ಬೆನ್ನಹಿಂದ ಅಹಿಂದ ವರ್ಗ ಸದಾ ನಿಲ್ಲಲಿದೆ ಎಂದರು.

