ಬೆಂಗಳೂರು: ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತು ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ಫೆ.28ರಿಂದ ಮಾರ್ಚ್ 17ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ತಮ್ಮ ಶಾಲೆಯ ಹೊರಗಿನ ಶಾಲೆಗಳಲ್ಲಿ ಪರೀಕ್ಷೆ ಬರೆಯಬೇಕಾಗಿದ್ದು, ಅವರಿಗೆ ಪ್ರಯಾಣದ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದೆ.
ಈ ವೇಳೆ ತಮ್ಮ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದು. ಸಿಬ್ಬಂದಿ ಪರೀಕ್ಷೆಗೆ ತೆರಳುವ ಮತ್ತು ವಾಪಸ್ಸಾಗುವ ವಿದ್ಯಾರ್ಥಿಗಳಿಗೆ ಸಹಕರಿಸಬೇಕು ಎಂದು ಸೂಚನೆ ನೀಡಲಾಗಿದೆ.

