ಬೆಂಗಳೂರು: ಅಕ್ರಮ ಬಾಂಗ್ಲಾ ವಲಿಸಿಗರು ಎಂಬ ನೆಪ ಮಾಡಿಕೊಂಡು ಕೂಲಿ ಕಾರ್ಮಿಕರಿಗೆ ಕಿರುಕುಳ ನೀಡುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಗಿಲು ಲೇಔಟ್ ಮನೆಗಳ ನೆಲಸಮ ಮಾಡಿದ ಪ್ರಕರಣದ ನಂತರ ಕೆಲವು ಕಾರ್ಮಿಕರ ಮನೆಗಳಿಗೆ ತೆರಳಿದ್ದ ಪುನೀತ್ ಕೆರೆಹಳ್ಳಿ, ಕೆಲವು ಕಾರ್ಮಿಕರಿಗೆ ದಾಖಲೆ ತೋರಿಸುವಂತೆ ಆವಾಜ್ ಹಾಕಿದ್ದು, ಅವರನ್ನು ಬೆದರಿಸಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ.

