ರಾಜಕೀಯ ಸುದ್ದಿ

ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Share It

ನವದೆಹಲಿ: 10 ವರ್ಷದ ನಂತರ ಕಾಂಗ್ರೆಸ್‌ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ಸಿಕ್ಕಿದ್ದು, ವಿಪಕ್ಷ ನಾಯಕನನ್ನಾಗಿ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಲಾಗಿದೆ.

ಶನಿವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಅಧಿಕೃತ ವಿರೋಧ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಳೆದ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟ ಉತ್ತಮ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.

ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಈ ವಿಷಯವನ್ರನು ಪ್ರಸ್ತಾಪ ಮಾಡಿ, ರಾಹುಲ್ ಗಾಂಧಿ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಕೇಳಲಾಯಿತು, ವೇಣುಗೋಪಾಲ್ ಹೇಳಿಕೆಗೆ ಬಹುತೇಕ ಸದಸ್ಯರು ಒಪ್ಪಿಗೆ ಸೂಚಿಸಿದರು. ಆದರೆ, ರಾಹುಲ್ ಗಾಂಧಿ ವಿಪಕ್ಷ ಸ್ಥಾನವನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದೇ ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಬಹುತೇಕ ಕಾಂಗ್ರೆಸ್‌ನ ಹಿರಿಯ ನಾಯಕರು ವಿಪಕ್ಷ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

updating…//


Share It

You cannot copy content of this page