ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕರಾದ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ.
ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಲೋಕಸಭೆಯ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

