ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಶುರು ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ. ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ ಎಂಬ ಭರವಸೆ ನೀಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.