ಬೆಂಗಳೂರು: ಜೈಲುಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಡಿಜಿಪಿ ಅಲೋಕ್ ಕುಮಾರ್ ಕಟ್ಟೆಚ್ಚರ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು ೨೫೦ಕ್ಕೂ ಅಧಿಕ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಜೈಲುಗಳಲ್ಲಿ ಮೊಬೈಲ್ ಬಳಕೆಗೆ ಅವಕಾಶ ನೀಡಲಾಗಿದೆ, ಗಾಂಜಾ ಸೇರಿದಂತೆ ಅನೇಕ ಐಷರಾಮಿ ವ್ಯವಸ್ಥೆಗಳನ್ನು ಕೈದಿಗಳಿಗೆ ಕಲ್ಪಿಸಲಾಗುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿಬರುವ ಹಿನ್ನೆಲೆಯಲ್ಲಿ ಅಲೋಕ್ ಕುಮಾರ್ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ.
ಕಳೆದ ಒಂದು ವಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ೧೦ಕ್ಕೂ ಹೆಚ್ಚು ಮೊಬೈಲ್ ವಶಕ್ಕೆಪಡೆಯಲಾಗಿದೆ. ಕಳೆದ ಮೂರು ತಿಂಗಳಿAದ ಈವರೆಗೆ ಸುಮಾರು ೨೫೦ ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ, ಮೊಬೈಲ್ ಸಿಮ್, ಚಾರ್ಜರ್, ಇಯರ್ ಫೋನ್ ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ.

