ಬೆಂಗಳೂರು: ಇಂದು ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.
ಬೆಳಗಾವಿ, ಹಾವೇರಿಯಲ್ಲಿ ಸೋಮವಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.