ಬೆಂಗಳೂರು: ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮೇ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಇಂದು (ಸೋಮವಾರ) ಮಳೆಯಾಗಲಿದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಇಂದು(ಸೋಮವಾರ) ಮಧ್ಯಾಹ್ನದ ಬಳಿಕ ಅಥವಾ ನಾಳೆ (ಮಂಗಳವಾರ) ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.