ಉಪಯುಕ್ತ ಸುದ್ದಿ

ರಾಜ್ಯದ 11 ಜಿಲ್ಲೆಗಳಲ್ಲಿ ಬಿಸಿಲ ಧಗೆಯ ಮಧ್ಯೆ ಮಳೆಯ ಸಿಂಚನ!

Share It

ಬೆಂಗಳೂರು:

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 11ಕ್ಕಿಂತ ಹೆಚ್ಚಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮೇ 1 ರಿಂದ ಮೇ 4ರವರೆಗೆ ಹೆಚ್ಚು ಮಳೆಯಾಗಲಿದೆ.

ಬೀದರ್​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ಇಷ್ಟಾದರೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲ ತಾಪ ಬಹಳ ಜೋರಾಗಿಯೇ ಇರಲಿದೆ.


Share It

You cannot copy content of this page