ಕರಾವಳಿ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಏ.17 ರವರೆಗೆ ಮಳೆ!

Share It

ಬೆಂಗಳೂರು: ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 3 ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ 2 ದಿನಗಳ ಕಾಲ ಮಳೆಯಾಗಲಿದೆ.

ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆಯಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 35.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಏಪ್ರಿಲ್​ 12,13 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Share It

You May Have Missed

You cannot copy content of this page