ಸೇಡಂ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸೇಡಂ ಪೊಲೀಸ್ ಠಾಣೆಗೆ ನೀರುನುಗ್ಗಿದ್ದು, ನೀರನ್ನು ಹೊರಹಾಕಲು ಪೊಲೀಸರು ಪರದಾಟ ನಡೆಸಿದರು.
ಇಂದು ಸಂಜೆಯಿಂದಲೇ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಪಟ್ಟಣದ ಕೆಲವು ಸ್ಥಳಗಳಲ್ಲಿ ನೀರು ನುಗ್ಗಿ ಅವಘಡ ಸಂಭವಿಸಿದೆ. ತಗ್ಗು ಪ್ರದೇಶದಲ್ಲಿರುವ ಇಂತಹ ಅನೇಕ ಸ್ಥಳಗಳೀಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ.
ಪೊಲೀಸ್ ಠಾಣೆ ತಗ್ಗು ಪ್ರದೇಶದಲ್ಲಿದ್ದು, ಮಳೆಯಿಂದ ನೀರಿನ ಹರಿವು ಜಾಸ್ತಿಯಾಗುತ್ತಿದ್ದಂತೆ ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿದೆ. ನೀರನ್ನು ಹೊರತೆಗೆಯಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟ ಘಟನೆ ನಡೆದಿದೆ.

