ಚನ್ನರಾಯಪಟ್ಟಣ: ಹಾಸನ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚನ್ನರಾಯಪಟ್ಟಣ, ಹೊಳೆನರಸೀಪುರದಲ್ಲಿ ಜನಜೀವನ ಅಸ್ತವ್ಯವಸ್ಥಗೊಂಡಿದೆ.
ಚನ್ನರಾಯಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಹೊಳೆ ನರಸೀಪುರದ ತಹಸೀಲ್ದಾರ್ ಕಚೇರಿಗೆ ನೀರು ನುಗ್ಗಿದ್ದು, ನೀರನ್ನು ಹೊರಹಾಕಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ತಹಸೀಲ್ದಾರ್ ಕಚೇರಿಯ ರೆಕಾರ್ಡ್ ರೂಂಗೆ ನೀರು ನುಗ್ಗಿದ್ದು, ಅನೇಕ ದಾಖಲೆಗಳು ನೀರಿನಲ್ಲಿ ಒದ್ದೆಯಾಗಿವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಮುರಿದುಬಿದ್ದಿದ್ದು, ಅನೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ.