ಉಪಯುಕ್ತ ಸುದ್ದಿ

2 ಸಾವಿರ ಹೊಸ ಬಸ್: 2 ಸಾವಿರ ಕೋಟಿ ಸಾಲ: ಇದು ಸಾರಿಗೆ ಇಲಾಖೆಗೆ ಸಿದ್ದರಾಮಯ್ಯ ನೀಡಿದ ಬಂಪರ್

Share It

2,000 ಹೊಸ ಬಸ್‌ಗಳ ಖರೀದಿಗೆ ಅನುದಾನ : 2 ಸಾವಿರ ಕೋಟಿ ಸಾಲ ಪಡೆಯಲು ಅನುಮತಿ, ಸರಕಾರದಿಂದಲೇ ಅಸಲು, ಬಡ್ಡಿ ತೀರಿಸುವ ತೀರ್ಮಾನ: ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಕ್ತಿ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ನಮ್ಮ ಸರಕಾರ ಇಟ್ಟಿರುವ ದಿಟ್ಟ ಹೆಜ್ಜೆಯಾಗಿದ್ದು, ಈ ಸಲದ ಬಜೆಟ್‌ನಲ್ಲಿ ೨ ಸಾವಿರ ಹೊಸ ಬಸ್ ಖರೀದಿಗೆ ಅನುದಾನ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿAದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9,000 ಹೊಸ ನೇಮಕಾತಿಗೆ ಅನುಮತಿ ಮತ್ತು 1,000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು.

ಇದರೊಂದಿಗೆ ಸಾರಿಗೆ ಸಂಸ್ಥೆಗಳು ರೂ.2,000 ಕೋಟಿ ಸಾಲ ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ಅನುಮತಿ ನೀಡಿದರು. ಸದರಿ ಸಾಲದ ಅಸಲು ಮತ್ತು ಬಡ್ಡಿಯನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದು, ಅದರಂತೆ ಈ ಸಾಲಿನ ಬಜೆಟ್‌ನಲ್ಲಿ ಆ ಸಂಬAಧ ಮೊತ್ತವನ್ನು ಪ್ರಧಾನ ಮಾಡಲಾಗಿದೆ ಎಂದರು.

ಮುಂದುವರೆದು, ನೂರಾರು ಸಂಖ್ಯೆಯಲ್ಲಿ ಹಳೆಯ ಬಸ್ಸುಗಳ ನಿಷ್ಕ್ರಿಯಗೊಳಿಸಲೇಬೇಕಾಗಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹೊಸ ಬಸ್ಸುಗಳ ಸೇರ್ಪಡೆಯನ್ನು ಪ್ರಸ್ತುತ ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ, 2005-2006ರಲ್ಲಿ ಜಿ.ಸಿ.ಸಿ ಆಧಾರದಲ್ಲಿ ಡೀಸೆಲ್ ಬಸ್ಸುಗಳ ಕಾರ್ಯಾಚರಣೆಯು ಸಾರಿಗೆ ಸಂಸ್ಥೆಗಳಲ್ಲಿ ಯಶಸ್ವಿಯಾಗಿರುವುದಿಲ್ಲ.

ಮುಖ್ಯಮಂತ್ರಿ ಹಾಗೂ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳಿಗೆ ವಿವರಿಸಿದ ನಂತರ, ಸಾರಿಗೆ ಸಂಸ್ಥೆಗಳ ಹಿತ ಕಾಯುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಿರುವುದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ಮತ್ತು ಇದಕ್ಕೆ ಬೇಕಾಗಿರುವ ಅನುದಾನವನ್ನು ಸರ್ಕಾರವೇ ಒದಗಿಸಲಾಗುವುದು ಎಂದು ಅಧಿವೇಶನದಲ್ಲಿ ಸಿಎಂ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು ಉತ್ತಮವಾದ ಕ್ರಮವಾಗಿದೆ. ನಮ್ಮ ಸರ್ಕಾರದ ಬದ್ಧತೆಯು ಸಾರಿಗೆ ಸಂಸ್ಥೆಗಳ ಹಿತ ಮತ್ತು ಪ್ರಯಾಣಿಕರಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವುದಾಗಿದೆ ಎಂದು ಅವರು ತಿಳಿಸಿದರು.


Share It

You cannot copy content of this page