ಸುದ್ದಿ

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಕ್ಯಾಬಿನೆಟ್ ಮಹತ್ವದ ನಿರ್ಧಾರ

Share It

ಬೆಂಗಳೂರು: ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ ಮಾಡುವ ನಿರ್ಧಾರಕ್ಕೆ ಇಂದು ನಡೆದ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೀಗಾಗಿ ಇನ್ನು ಮುಂದೆ ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆ ಅಂತಾ ಮರು ಹೆಸರು ಪಡೆಯಲಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ರಾಮನಗರ ಜಿಲ್ಲೆಯ ಹೆಸರು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮರು ನಾಮಕರಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಜನರ ಬೇಡಿಕೆ ಮೇಲೆ ಈ ನಿರ್ಣಯ ಮಾಡಲಾಗಿದ್ದು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ‌ ಮಾಡಲಾಗಿದೆ ಅಂತ ತಿಳಿಸಿದರು. ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆ ಆಗಲಿದೆ. ಅದನ್ನ ಹೊರತುಪಡಿಸಿ ಉಳಿದ ಎಲ್ಲವೂ ಈಗ ಇರುವಂತೆ ಇರಲಿದೆ. ಇದು ಚುನಾವಣೆ ದೃಷ್ಟಿಯಿಂದ ಮಾಡಿರೋದಲ್ಲ. ಜನರ ಬೇಡಿಕೆ ಹಿನ್ನಲೆಯಲ್ಲಿ ಮಾಡಿದ್ದು ಅಂತ ಸಚಿವರು ಹೆಚ್.ಕೆ. ಪಾಟೀಲ್ ಸಮರ್ಥನೆ ಮಾಡಿಕೊಂಡರು.


Share It

You cannot copy content of this page