ರಾಜಧಾನಿಯಲ್ಲಿ ಹೆಚ್ಚುತ್ತಿವೆ ಅತ್ಯಾಚಾರ ಪ್ರಕರಣ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರ ಕಗ್ಗಲೀಪುರದ ಫಾಮರ್್ಹೌಸ್ ನಲ್ಲಿ 53 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ.
ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಖೋರಕ್ಪುರ ಮೂಲದ 19 ವರ್ಷದ ಯುವಕನೊಬ್ಬ 55 ವರ್ಷದ ಮಹಿಳೆಯನ್ನು ನಿಮರ್ಾಣ ಹಂತದ ಕಟ್ಟಡದಲ್ಲಿ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಿ ಪರಾರಿಯಾಗಿದ್ದ ಪ್ರಕರಣ ವರದಿಯಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಹೊರವಲಯದಲ್ಲಿರುವ ಕನಕಪುರ ರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಫಾಮರ್್ ಹೌಸ್ ನಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿದೆ.
ಶುಕ್ರವಾರ ರಾತ್ರಿ ಫಾಮರ್್ ಹೌಸ್ ಗೆ ನುಗ್ಗಿರುವ ದುಷ್ಕಮರ್ಿಗಳು ದರೋಡೆ ಮಾಡು ಉದ್ದೇಶದಿಂದಲೇ ಒಳಗೆ ಬಂದಿದ್ದಾರೆ. ಹಣ, ವಡವೆಗಳನ್ನೆಲ್ಲ ಬಾಚಿದ ನಂತರ ಕುಡಿದ ಮತ್ತಿನಲ್ಲಿದ್ದ ಕಳ್ಳರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಸಾಮಾಹಿಕವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ನಂತರ ಆಕೆಯನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪದೇಪದೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು, ಜಾಗೃತಿ ಮೂಡಿಸುವ ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.