ಅಪರಾಧ ಸುದ್ದಿ

ಸಿಸಿಬಿ ಕಸ್ಟಡಿಯಲ್ಲಿ ರೇವ್ ಪಾರ್ಟಿ ಆರೋಪಿಗಳು

Share It

ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಆರೋಪಿಗಳನ್ನು ಆನೇಕಲ್ ನ್ಯಾಯಾಲಯಕ್ಕೆ ಸಿಸಿಬಿ ಹಾಜರುಪಡಿಸಿದೆ.

ತೆಲುಗು ನಟಿ ಹೇಮಾ ಸೇರಿದಂತೆ ಉಳಿದೆಲ್ಲ ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆದು, ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಏಳು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದು, ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಕೋರಿದ್ದಾರೆ.

ಸಿಸಿಬಿ ಪೊಲೀಸರು ಹೇಮಾ ಸೇರಿ ಈವರೆಗೆ ಪ್ರೆಕರಣದಲ್ಲಿ 18 ಆರೋಪಿಗಳನ್ನು ಬಂಧಿಸಿದೆ. ಪಾರ್ಟಿ ಆಯೋಜಕರು, ಡ್ರಗ್ಸ್ ಪೆಡ್ಲರ್‌ಗಳು ಮತ್ತು ಡ್ರಗ್ಸ್ ಸೇವನೆ ಆರೋಪ ಹೊತ್ತವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ ಹೆಚ್ಚಿನ ವಿಚಾರಣೆಗೆ ಸಿಸಿಬಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದು, ನ್ಯಾಯಾಲಯದ ತೀರ್ಮಾನವೇನು ಎಂಬುದನ್ನು ಕಾದು ನೋಡಬೇಕಿದೆ.


Share It

You cannot copy content of this page