ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ ಹೆಸರು ನೋಂದಾಯಿಸುವ ದಿನಾಂಕವನ್ನು ಮೇ 19 ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಆದೇಶ ಹೊರಡಿಸಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ ಆಗಿತ್ತು. ಇನ್ನಷ್ಟು ವಿದ್ಯಾರ್ಥಿಗಳ ನೋಂದಣಿ ಬಾಕಿ ಇದ್ದ ಹಿನ್ನೆಲೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದೆ.
2024 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ಕ್ಕೆ ನೋಂದಾಯಿಸಿಕೊAಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣ ಗೊಳಿಸಲಾಗಿಲ್ಲದ, ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನ್ನು ನಡೆಸುವ ಸಂಬAಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗೆ ನೋಂದಣಿ ದಿನಾಂಕವನ್ನು ಜೂನ್ 19 (ಮಧ್ಯರಾತ್ರಿ 12 ಗಂಟೆ ) ವರೆಗೆ ವಿಸ್ತರಿಸಲಾಗಿದೆ.
ಜೂನ್ 7 ರಿಂದ ಆರಂಭ ಆಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು ೩ ದಿನ ಅವಧಿ ವಿಸ್ತರಣೆ ಮಾಡಲಾಗಿದೆ. ಪರೀಕ್ಷೆ -2 ಕ್ಕೆ ಹೆಸರು ನೋಂದಣಿಗೆ ಕಡೆಯ ಅವಕಾಶವಾಗಿದೆ. ಈ ಅವಕಾಶವನ್ನು ತಪ್ಪಿಸಿಕೊಳ್ಳದೇ ಅರ್ಜಿ ಸಲ್ಲಿಕೆ ಮಾಡಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.